ಬೆಂಗಳೂರು : ವಿಧಾನಸಭಾ ಅಧಿವೇಶನದಲ್ಲಿ ಸಮಯವನ್ನ ಸರ್ಮಪಕವಾಗಿ ಬಳಸಿಕೊಂಡು ಕರ್ನಾಟಕದ ಅಭಿವೃದ್ಧಿ ಕುರಿತಾಗಿ ಚರ್ಚೆ ನಡೆಸಬೇಕೆಂಬ ತೀರ್ಮಾನವನ್ನ ಎಲ್ಲರೂ ತೆಗೆದುಕೊಂಡಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಈ ಕುರಿತು ಮಾತನಾಡಿದ ಸಚಿವರು, ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳನ್ನ ಮಾರ್ಚ್ ಅಂತ್ಯದೊಳಗೆ ಮುಗಿಸಲಾಗುವುದು. ಹೀಗಾಗಿ ಅಧಿವೇಶನದಲ್ಲಿ ಎಲ್ಲರೂ ಕೂಡ ಸಲಹೆ, ಸಹಕಾರ ಕೊಡಬೇಕು ಎಂದು ಮನವಿ ಮಾಡಿಕೊಂಡರು.