ಶಿವಮೊಗ್ಗ : ಇಲ್ಲಿನ ಕೇಂದ್ರ ಕಾರಾಗೃಹದ ಮೇಲೆ ಬುಧವಾರ ರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಪ್ರಮುಖ ಆರೋಪಿ ಒಬ್ಬನಿಂದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಜೈಲಿನಲ್ಲಿರುವ ಆರೋಪಿ ಬಚ್ಚನ್ ಎಂಬುವವನು ಜೈಲಿನಲ್ಲಿ ಮೊಬೈಲ್ ಬಳಕೆ ಮಾಡುತ್ತಿದ್ದ ಕುರಿತಾಗಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ಶಿವಮೊಗ್ಗ ಸಿಇಎನ್ ಠಾಣೆ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಅಂದ್ಹಾಗೆ ಇತ್ತೀಚೆಗೆ ಜೈಲಿನಿಂದಲೆ ಕರೆ ಮಾಡಿದ್ದ ಬಚ್ಚನ್ ಮೇಲೆ, ಉದ್ಯಮಿಯೊಬ್ಬರಿಗೆ ಬೆದರಿಕೆ ಒಡ್ಡಿದ್ದ ಆರೋಪವಿದೆ. ಈ ಕುರಿತು ತುಂಗಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ