ಶಿವಮೊಗ್ಗ : ಮಂಗಳವಾರ ಶಿವಮೊಗ್ಗ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಸರಿ ಬಾವುಟ ಹಾರಿಸಿದ್ದ ಧ್ವಜಸ್ತಂಭದಲ್ಲಿ ಎನ್‌ಎಸ್‌ಯುಐ ವತಿಯಿಂದ ರಾಷ್ಟ್ರಧ್ವಜ ಹಾರಿಸಲಾಗಿದೆ.
ರಾಜಕೀಯ ಹಿತಾಸಕ್ತಿಯಿಂದ ಕಾಣದ ಕೈಗಳ ಕುಮ್ಮಕ್ಕಿನಿಂದಾಗಿ ಹಿಜಾಬ್ ಕೇಸರಿ ಶಾಲು ವಿವಾದ ಸೃಷ್ಟಿಯಾಗಿದ್ದು, ಇದನ್ನು ಎನ್‌ಎಸ್‌ಯುಐ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ದೇಶದಲ್ಲಿ ಹಿಜಾಬ್ ಅಥವಾ ಕೇಸರಿ ಶಾಲು ಮುಖ್ಯವಲ್ಲ. ತ್ರಿವರ್ಣ ಧ್ವಜವೇ ಸರ್ವಶ್ರೇಷ್ಠ. ಆದ್ದರಿಂದ ಶಿವಮೊಗ್ಗದಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ವಿದ್ಯಾರ್ಥಿಗಳು ಹಿಜಾಬ್ ಕೇಸರಿ ಶಾಲು ವಿಚಾರ ಕೈಬಿಡಬೇಕು. ಹಿಂದಿನಂತೆ ತರಗತಿಗಳಲ್ಲಿ ಸಹೋದರ ಭಾವನೆಯಿಂದ ಇರಬೇಕು. ಈ ಮೂಲಕ ವಿದ್ಯಾರ್ಥಿಗಳು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಮನವಿ ಮಾಡಿದ್ದಾರೆ.
ಆದರೆ ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದು, ಅದನ್ನು ಉಲ್ಲಂಘಿಸಿದ ಆರೋಪದ ಮೇಲೆ ಎನ್‌ಎಸ್‌ಯುಐ ಕಾರ್ಯರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.