ಮಂಗಳವಾರ ಸೊರಬದಲ್ಲಿ ಬೃಹತ್ ಪ್ರತಿಭಟನೆ 

ಸೊರಬ : ಬಗರ್ ಹುಕುಂ ಹಾಗೂ ಅರಣ್ಯ ಹಕ್ಕು ಸಮಿತಿಯು ಸಕಾರಣವಿಲ್ಲದೆ ಅರ್ಜಿಗಳನ್ನ ತಿರಸ್ಕರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸೊರಬದಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದ ಡಬ್ಬಲ್ ಇಂಜಿನ್ ಸರ್ಕಾರಗಳು ಕಾರಣವಿಲ್ಲದೆ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದು, ಅರ್ಹ ಫಲಾನುಭವಿಗಳನ್ನ ಬೀದಿಗೆ ತಳ್ಳುವ ಹುನ್ನಾರ ನಡೆಯುತ್ತಿದೆ. ಆದ್ದರಿಂದ ಸೊರಬದಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಸಭೆಗೆ ಎಲ್ಲಾ ರೈತ ಬಾಂಧವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಈ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಬೇಕೆಂದು ಹೇಳಿದ್ದಾರೆ.