ಹರ್ಷ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ 

ಶಿವಮೊಗ್ಗ : ದುಷ್ಕರ್ಮಿಗಳ ಹಲ್ಲೆಯಿಂದ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ಹಾಗೂ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ವಿಶ್ವಹಿಂದೂ ಪರಿಷತ್ ಮತ್ತು ವಿವಿಧ ಹಿಂದೂ ಸಂಘಟೆನಗಳಿಂದ ಪ್ರತಿಭಟನೆ ನಡೆಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಜನರು ನೂರಾರು ಸಂಖ್ಯೆಯಲ್ಲಿ ಭಾಗವಹಿಸದ್ದರು. ಹರ್ಷ ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಎಚ್ಚರಿಕೆಯ ಸಂದೇಶ ರವಾನೆ ಮಾಡಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸದರು. ಪ್ರತಿಭಟನೆಯಲ್ಲಿ ಹಲವು ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರು ಕೂಡ ಭಾಗಿಯಾಗಿ ಈ ಕುರಿತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಹಾಗೂ ಎಸ್‌ಪಿ ಲಕ್ಷ್ಮೀಪ್ರಸಾದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.