ಸೊರಬದಲ್ಲಿ ಬೃಹತ್ ಪ್ರತಿಭಟನೆ 

ಸೊರಬ : ಬಗರ್ ಹುಕುಂ ಹಾಗೂ ಅರಣ್ಯ ಹಕ್ಕು ಸಮಿತಿಯ ಅರ್ಜಿಗಳನ್ನು ಸಕಾರಣವಿಲ್ಲದೆ ತಿರಸ್ಕರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಫಲಾನುಭವಿಗಳನ್ನು ಬೀದಿಗೆ ತಳ್ಳುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿ ಸೊರಬದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಮಾಜಿ ಶಾಸಕ ಮಧು ಬಂಗಾರಪ್ಪ ನೇತೃತ್ವದಲ್ಲಿ ಕರ್ನಾಟಕ ಪ್ರಾದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಳಾಗಿತ್ತು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ರಂಗನಾಥ ಸ್ವಾಮಿ ದೇವಸ್ಥಾನದಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನೆಡೆಯಿತು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.