ಶಿವಮೊಗ್ಗ: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಏಕಪಕ್ಷೀಯವಾಗಿ ಕೇಂದ್ರಕ್ಕೆ ಶಿಫಾರಸು ಮಾಡಲು ಮುಂದಾಗಿರುವ ಸರ್ಕಾರದ ನಡೆ ಸರಿಯಲ್ಲ ಎಂದು ಆರೋಪಿಸಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಕಾರ್ಯಕರ್ತರು, ವರದಿಯ ಅನುಷ್ಠಾನವು ಪರಿಶಿಷ್ಟ ಜಾತಿಗಳ ಸಹೋದರ ಸಮುದಾಯಗಳ ಮಧ್ಯೆ ದ್ವೇಷಕ್ಕೆ ಕಾರಣವಾಗುತ್ತದೆ. ಆದ್ದರಿಂದ ವರದಿ ಅನುಷ್ಠಾನವನ್ನು ತಡೆಹಿಡಿಯಬೇಕು. ವರದಿಯನ್ನು ಕೇಂದ್ರಕ್ಕೆ ಒಪ್ಪಿಸದೆ, ಸಾರ್ವಜನಿಕರ ಚರ್ಚೆಗೆ ಬಿಡುಗಡೆ ಮಾಡಬೇಕು. ಅಲ್ಲದೆ ದ್ವೇಷದ ಭಾವನೆ ಬಿತ್ತುತ್ತಿರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹಾಗೂ ರಾಜ್ಯ ಸಚಿವ ಗೋವಿಂದ ಕಾರಜೋಳ ಅವರನ್ನು ಸಂಪುಟದಿAದ ಕೈಬಿಡಬೇಕು ಎಂದು ಆಗ್ರಹಿಸಿದ್ರು.