ಮುಗಿಯದ ಪಠ್ಯ ಪುಸ್ತಕ ಪರಿಷ್ಕರಣೆ ಬಿಕ್ಕಟ್ಟು : ಶಿವಮೊಗ್ಗದಲ್ಲಿ ನಡೆದ ಬೃಹತ್ ಪ್ರತಿಭಟನೆ 

ಶಿವಮೊಗ್ಗ : ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣಾ ಬಿಕ್ಕಟ್ಟು ದಿನೆ ದಿನೆ ಬಿಗಿಯಾಗ್ತಾನೆ ಇದೆ. ಪಠ್ಯ ಪರಿಷ್ಕರಣೆ. ಗಣ್ಯರಿಗೆ ಅವಮಾನ ಹೀಗೆ ಹಲವು ವಿಚಾರವನ್ನು ಖಂಡಿಸಲಾಗುತ್ತಿದೆ.

ಈ ಹಿನ್ನೆಲೆ ಶಿವಮೊಗ್ಗದಲ್ಲಿಯೂ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ರದ್ದು ಮಾಡಬೇಕು. ನಾಡಗೀತೆಗೆ ಅವಮಾನ ಮಾಡಿದವರನ್ನು ಬಂಧಿಸಬೇಕು ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ಶಿವಪ್ಪ ನಾಯಕ ವೃತ್ತದಿಂದ ಡಿಸಿ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ಬಂದು ಜಿಲ್ಲಾಧಿಕಾರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಪ್ರತಿಭಟನೆಯಲ್ಲಿ ಸಾಹಿತಿಗಳು, ಪ್ರಗತಿಪರ ಚಿಂತಕರು, ಸಂಘಟನೆಗಳ ಪ್ರಮುಖರು ಭಾಗಿಯಾಗಿದ್ದರು.