ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಕೋಮುಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿದ್ದಾರೆ. ಈ ಕಾರಣಕ್ಕೆ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ಮೂಲಕ ತೀರ್ಥಹಳ್ಳಿಯ ಗೌರವ ಕಾಪಾಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಚಂದ್ರಶೇಖರ್ ಎಂಬ ಯುವಕನ ಕೊಲೆ ಕುರಿತು ಗೃಹ ಸಚಿವರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಗೃಹ ಸಚಿವರು ರಾಜೀನಾಮೆ ಕೊಡಬೇಕು. ಕೋಮು ಗಲಭೆ ಸೃಷ್ಟಿಸುವಂತಹ ಹೇಳಿಕೆ ನೀಡಿರುವ ಗೃಹ ಸಚಿವರು ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗಿದೆ.