ಸ್ಮಾಟ್‌ಸಿಟಿ ಹೆಸರಿನಲ್ಲಿ ಕಳಪೆ ಕಾಮಗಾರಿ : ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ 

ಶಿವಮೊಗ್ಗ : ಮಳೆಯಿಂದಾಗಿ ಶಿವಮೊಗ್ಗ ನಗರದಲ್ಲಾದ ಅನಾಹುತಗಳಿಗೆ ಸ್ಮಾರ್ಟ್‌ಸಿಟಿ ಕಾಮಗಾರಿಯೇ ಕಾರಣ. ಸ್ಮಾಟ್‌ಸಿಟಿ ಹೆಸರಿನಲ್ಲಿ ಕಳಪೆ ಕಾಮಗಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಕುವೆಂಪು ರಸ್ತೆಯಲ್ಲಿ ಪ್ರತಿಭಟನೆ ಮಾಡಿದರು. ಸ್ಮಾರ್ಟ್‌ಸಿಟಿಯಲ್ಲಿ ಕಳಪೆ ಕಾಮಗಾರಿಗಳನ್ನು ಮಾಡಲಾಗ್ತಾಯಿದೆ ಹಾಗೂ ಯೋಜನೆಯಲ್ಲಿ ಸಾಕಷ್ಟು ಭ್ರಷ್ಟಾಚಾರವನ್ನು ನಡೆಸಲಾಗತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.