ಶಿವಮೊಗ್ಗ : ಸ್ಮಾರ್ಟ್ ಸಿಟಿ ಕಾಮಗಾರಿಯು ಅವೈಜ್ಞಾನಿಕ ಹಾಗೂ ಕಳಪೆ ಗುಣಮಟ್ಟದಾಗಿದ್ದು ದೂರ ದೃಷ್ಟಿ ಇಲ್ಲದ ಕಾಮಗಾರಿಯಾಗಿದೆ ಎಂದು ಆಮ್ ಆದ್ಮಿ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಭಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಸ್ಮಾರ್ಟ್ ಸಿಟಿ ಕಾಮಗಾರಿಯ ಈ ಅವ್ಯವಸ್ಥೆಗೆ ಸ್ಮಾರ್ಟ್ ಸಿಟಿ ಎಂ ಡಿ ಚಿದಾನಂದ ವಠಾರೆಯ ಬೇಜವಾಬ್ದಾರಿ ಹಾಗೂ ನಿರ್ಲಕ್ಷವೇ ಕಾರಣ. ಇದರಿಂದ ಶಿವಮೊಗ್ಗ ನಗರದ ಸಾರ್ವಜನಿಕರು ಬೇಸತ್ತಿದ್ದಾರೆ. ಆದ್ದರಿಂದ ಚಿದಾನಂದ ವಠಾಣೆಯವರನ್ನು ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಹಾಗೂ ಕಳಪೆ ಕಾಮಗಾರಿ ನಡೆಸಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ರು.
ಆಮ್ ಆದ್ಮಿ ಮುಖಂಡ ಏಳುಮಲೈ ಬಾಬು ಆರೋಪ
ಶಿವಮೊಗ್ಗ ಸ್ಮಾರ್ಟ್‌ಸಿಟಿ ಕಾಮಗಾರಿ ಕಳಪೆ ಗುಣಮಟ್ಟದ್ದಾಗಿರುವುದಕ್ಕೆ ಕಾಮಗಾರಿಯಲ್ಲಿ ನಡೆದಿರುವ ಭ್ರಷ್ಟಾಚಾರವೇ ಕಾರಣ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಏಳುಮಲೈ ಬಾಬು ಆರೋಪಿಸಿದ್ದಾರೆ. ಕಳೆದ ೧೫ ದಿನಗಳಲ್ಲಿ ನಗರದಲ್ಲಿ ನಿರಂತರವಾಗಿ ಮಳೆಯಾಗಿದ್ದು ನಗರದಲ್ಲಿ ನಡೆದಿರುವ ಅನೇಕ ಸ್ಮಾರ್ಟ್‌ಸಿಟಿ ಕಾಮಗಾರಿಗಳು ಹಾಳಾಗಿದೆ. ಬಹುತೇಕ ಕಡೆಗಳಲ್ಲಿ ಫುಟ್‌ಪಾತ್ ಕಿತ್ತುಬಂದಿದ್ದು ಸ್ಮಾರ್ಟ್‌ಸಿಟಿ ಕಾಮಗಾರಿಯ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ಜನರ ತೆರಗೆ ದುಡ್ಡನ್ನು ಲೂಟಿ ಮಾಡಲಾಗ್ತಾಯಿದೆ. ಆದ್ದರಿಂದ ಈ ಸಂಬಂಧ ಸೂಕ್ತ ತನಿಖೆಯಾಗಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ರು.