ಬೆಂಗಳೂರು: ಯಾವುದೇ ಕಾರಣಕ್ಕೂ ರೈತರ ಐಪಿ ಸೆಟ್ಗಳಿಗೆ ಮೀಟರ್ ಅಳವಡಿಕೆ ಮಾಡೋದಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ವಿಧಾನಸಭೆ ಅಧಿವೇಶದಲ್ಲಿ ಮಾತಾಡಿದ ಅವರು, ರೈತರ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಕೆ ಕುರಿತು ಸ್ಪಷ್ಟನೆ ನೀಡಿದ್ರು. ಈ ಕುರಿತು ಸರಕಾರದ ಮುಂದೆ ಯಾವುದೇ ಪ್ರಸ್ತಾವೆ ಇಲ್ಲ. ನಾನು ಅಧಿಕಾರ ವಹಿಸಿಕೊಂಡ ನಂತರ ಈ ಕುರಿತು ಸ್ಪಷ್ಟನೆ ನೀಡಿದ್ದೇನೆ. ಇದೀಗ ಅಧಿವೇಶದಲ್ಲೂ ಸ್ಪಷ್ಟಪಡಿಸುತ್ತಿದ್ದೇನೆ. ಯಾವುದೇ ಕಾರಣಕ್ಕೂ ರೈತರ ಐಪಿ ಸೆಟ್ಗೆ ಮೀಟರ್ ಅಳವಡಿಸೋದಿಲ್ಲ ಎಂದು ಹೇಳಿದ್ರು.