ರೈತಸಂಘ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳ ಚಂದ್ರಶೇಖರ್ ವಜಾ : ನೂತನ ಅಧ್ಯಕ್ಷರಾಗಿ ಹೆಚ್.ಆರ್.ಬಸವರಾಜಪ್ಪ ಆಯ್ಕೆ

ಶಿವಮೊಗ್ಗ : ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧದ ಲಂಚ ಆರೋಪ ಕೇಳಿಬಂದ ಬೆನ್ನೆಲ್ಲೆ ಅವರನ್ನು ರೈತಸಂಘದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ. ಹಾಗೇನೆ ನೂತನ ಅಧ್ಯಕ್ಷರಾಗಿ ಹೆಚ್.ಆರ್.ಬಸವರಾಜಪ್ಪರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಡೆದ ತುರ್ತು ರಾಜ್ಯ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಸಂಘದ ಖಜಾಂಚಿ ಚಿಕ್ಕಸ್ವಾಮಿ ವಹಿಸಿಕೊಂಡಿದ್ದರು. ಸಭೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಪ್ರಮುಖರು ಆಗಮಿಸಿದ್ದರು. ಎಲ್ಲರ ಅನಿಸಿಕೆಯನ್ನು ಪಡೆದೇ ಹೆಚ್.ಆರ್.ಬಸವರಾಜಪ್ಪ ಅವರನ್ನು ನೂತನ ಅಧ್ಯಕ್ಷರಾಗಿ ಕುರುವ ಗಣೇಶ್ ಘೋಷಣೆ ಮಾಡಿದರು. ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಹೆಚ್.ಆರ್.ಬಸವರಾಜಪ್ಪ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಳಿಕ ರಾಕೇಶ್ ಟಿಕಾಯತ್ ಮೇಲೆ ನಡೆದಿರುವ ಹಲ್ಲೆ ಹಾಗೂ ಮುಖಕ್ಕೆ ಮಸಿ ಎರಚಿರುವ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿ, ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.