ಬೆಳಗಾವಿ : ಅತ್ಯಾಚಾರದ ಕುರಿತು ವಿಧಾನಸಭೆ ಅಧಿವೇಶನದಲ್ಲಿ ತಾವು ನೀಡಿದ್ದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸದನದಲ್ಲಿ ಕ್ಷಮೆ ಯಾಚನೆ ಮಾಡಿದ್ದಾರೆ.
ಅತ್ಯಾಚಾರದ ಕುರಿತು ಅಧಿವೇಶನದಲ್ಲಿ ನೀಡಿದ ಅಸಡ್ಡೆ ಮತ್ತು ನಿರ್ಲಕ್ಷ್ಯ ಹೇಳಿಕೆಗೆ ಎಲ್ಲರಲ್ಲಿಯೂ ಕ್ಷಮೆ ಯಾಚಿಸುತ್ತೇನೆ. ಅತ್ಯಂತ ಹೇಯವಾದ ಅಪರಾಧವನ್ನು ಅಲಕ್ಷಿಸುವುದು ಅಥವಾ ಕಾಣುವುದು ನನ್ನ ಉದ್ದೇಶವಾಗಿರುವುದಿಲ್ಲ. ತಾವು ಆಡಿದ ಮಾತಿಗೆ ಅಧಿವೇಶನದಲ್ಲಿಯೇ ವಿಷಾಧವನ್ನು ರಮೇಶ್ ಕುಮಾರ್ ವ್ಯಕ್ತಪಡಿಸಿದ್ದಾರೆ.