ಶಿವಮೊಗ್ಗ : ಮಹಾನಗರ ಪಾಲಿಕೆಯಲ್ಲಿ ೭೩ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಮೇಯರ್ ಸುನೀತಾ ಅಣ್ಣಪ್ಪ ಧ್ವಜಾರೋಹಣ ನೆರವೇರಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರೂ ಗಾಂಧೀಜಿ ಮತ್ತು ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಮಹಾನಗರ ಪಾಲಿಕೆ ಸದಸ್ಯರು, ಕಾರ್ಮಿಕರು, ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.