11 ಪ್ರಮುಖ ವಿಮಾನ ನಿಲ್ದಾಣಗಳ ಜೋಡಣೆಗೆ ಸಂಸದ ಬಿ.ವೈ.ಆರ್ ಮನವಿ

ದೆಹಲಿ : ವಿಮಾನ ನಿಲ್ದಾಣ ಕಾಮಾಗಾರಿ ನಡೆಯುತ್ತಿದೆ. ಈ ಮಧ್ಯೆ ಸಂಸದ ಬಿ.ವೈ.ರಾಘವೇಂದ್ರ, ಕೇಂದ್ರ ನಾಗರಿಕ ವಿಮಾನಯಾನ ಖಾತೆಯ ಸಚಿವರಾದ ಜ್ಯೋತಿರಾಧಿತ್ಯ ಸಿಂಧಿಯಾ ಅವರನ್ನ ಭೇಟಿ ಮಾಡಿ ವಿಮಾನ ನಿಲ್ದಾಣದ ಹಲವು ವಿಚಾರಗಳ ಕುರಿತು ಮನವಿ ಸಲ್ಲಿಸಿದರು.

ಶಿವಮೊಗ್ಗದಲ್ಲಿ ನಿರ್ಮಾಣವಾಗಿತ್ತಿರುವ ವಿಮಾನ ನಿಲ್ದಾಣವು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ರಾಜ್ಯದ ಎರಡನೇ ಅತಿ ಉದ್ದದ ರನ್‌ವೇ ಹೊಂದಿದೆ. ಹಾಗಾಗಿ ದೇಶದ ರಾಜಧಾನಿ ಸೇರಿದಂತೆ 11 ಪ್ರಮುಖ ನಗರಗಳ ವಿಮಾನ ನಿಲ್ದಾಣಕ್ಕೆ ಜೋಡಣೆ ಮಾಡುವಂತೆ ಮನವಿ ಸಲ್ಲಸಿದರು.

ಮುಂಬೈ- ಶಿವಮೊಗ್ಗ ಮಂಬೈ, ಮುಂಬೈ-ಶಿವಮೊಗ್ಗ-ಮಂಗಳೂರು, ಮುಂಬೈ-ಶಿವಮೊಗ್ಗ-ಚೆನ್ನೈ, ಮುಂಬೈ-ಶಿವಮೊಗ್ಗ-ತಿರುಪತಿ, ಶಿವಮೊಗ್ಗ-ಕಲಬುರಗಿ-ಹೈದರಬಾದ್, ಶಿವಮೊಗ್ಗ-ಕಲಬುರಗಿ-ದೆಹಲಿ, ಬೆಂಗಳೂರು-ಶಿವಮೊಗ್ಗ-ಬೆಳಗಾವಿ, ಬೆಂಗಳೂರು-ಶಿವಮೊಗ್ಗ-ದೆಹಲಿ, ಕೊಚ್ಚಿನ್-ಶಿವಮೊಗ್ಗ-ದೆಹಲಿ, ಬೆಂಗಳೂರು-ಶಿವಮೊಗ್ಗ-ಗೋವಾ ಸೇರಿದಂತೆ ಹೈದರಬಾದ್-ಶಿವಮೊಗ್ಗ-ಕೊಚ್ಚಿನ್ ಮಾರ್ಗಗಳಿಗೆ ಟೆಂಡರ್ ಕರೆಯುವ ಮೂಲಕ ವಿಮಾನ ಸಂಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದ್ದಾರೆ.