ಸವಳಂಗ : ಮದುವೆ ಸಮಾರಂಭಕ್ಕೆ ಹೊರಟ್ಟಿದ್ದ ನಾಲ್ವರು ರಸ್ತೆ ಅಪಘಾತದಿಂದಾಗಿ ಧಾರುಣವಾಗಿ ಸಾವನಪ್ಪಿದ ಘಟನೆ ಸವಳಂಗ ಸಮೀಪದ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಶಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂರು ಜನ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಕಾರು ಚಾಲಕ ಸುನೀಲ್, ದ್ರಾಕ್ಷಾಯಿಣಮ್ಮ, ಸುಮಾ ಮತ್ತು ಶಾರದಮ್ಮ ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ. ಇನ್ನು ಕಾರಿನಲ್ಲಿದ್ದ ಆಶಾ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರೆಲ್ಲರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಡೇಹಳ್ಳಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಹಳೇಜೋಗ ಗ್ರಾಮದಲ್ಲಿನ ಮದುವೆ ಕಾರ್ಯಕ್ರಮಯೊಂದಕ್ಕೆ ಆಗಮಿಸಿದ್ದ ವೇಳೆ ಅಪಘಾತ ನಡೆದಿದೆ. ಇನ್ನು ಘಟನಾ ಸ್ಥಳಕ್ಕೆ ನ್ಯಾಮತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಸಿಪಿಐ ದೇವರಾಜ್ ಆಗಮಿಸಿದ್ದು, ಮೃತದೇಹಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಗಿದೆ.