ಕಮಲ ಹಿಡಿದ ಎಸ್.ಕುಮಾರ್, ಸತೀಶ್ ಗೌಡ 

ಶಿವಮೊಗ್ಗ : ಭದ್ರಾವತಿಯಲ್ಲಿ ಕಮಲ ಅರಳಿಸಲು ಬಿಜೆಪಿ ಸಾಕಷ್ಟು ಪ್ರಯತ್ನ ಮಾಡ್ತಾಯಿದೆ. ಇದೀಗ ಭದ್ರಾವತಿಯ ಎಸ್.ಕುಮಾರ್ ಹಾಗೂ ಸತೀಶ್ ಗೌಡ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಇವರ ಜೊತೆಗೆ ಇನ್ನೂ ಅನೇಕರು ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಉಸ್ತುವರಿ ಸಚಿವ ಕೆ.ಸಿ.ನಾರಾಯಣಗೌಡ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಬಿಜೆಪಿ ಕಾರ್ಯಾಲಯದಲ್ಲಿ ಅತ್ಯಂತ ಸಂಭ್ರಮದಿಂದ ಇವರನ್ನ ಬರಮಾಡಿಕೊಳ್ಳಲಾಗಿದೆ. ಅಭಿಮಾನಿಗಳು ಘೋಷಣೆ ಕೂಗಿ ಸ್ವಾಗತಿಸಿದರು.