ವಿಶ್ವವಿಖ್ಯಾತ ಮೈಸೂರು ದಸರಾಗೆ ಅದ್ಧೂರಿ ಚಾಲನೆ 

ಮೈಸೂರು: ಇಂದಿನಿಂದ ನವರಾತ್ರಿ ಆರಂಭವಾಗಿದ್ದು, ವಿಶ್ವವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಉತ್ಸವದ ಉದ್ಘಾಟಕರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬೆಳ್ಳಿ ರಥದಲ್ಲಿರುವ ಚಾಮುಂಡೇಶ್ವರಿ ದೇವಿಯ ಉತ್ಸವ ಮರ‍್ತಿಗೆ ಪುಷ್ಪರ‍್ಚನೆ ಮಾಡುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಿದರು.

ಚಾಮುಂಡಿ ಬೆಟ್ಟದಲ್ಲಿ ಆಯೋಜನೆಗೊಂಡಿದ್ದ ವೇದಿಕೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ೮.೨೬ಕ್ಕೆ ಸಂದ ಶುಭ ತುಲಾ ಲಗ್ನದಲ್ಲಿ ಪುಷ್ಪರ‍್ಚನೆ ನೆರವೇರಿತು. ಈ ಮೂಲಕ ವಿಶ್ವವಿಖ್ಯಾತ ೪೧೧ನೇ ಮೈಸೂರು ದಸರಾಗೆ ಅಧಿಕೃತವಾಗಿ ಚಾಲನೆ ಸಿಕ್ಕಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಎಸ್.ಟಿ.ಸೋಮಶೇಖರ್ ಇತರ ಅನೇಕ ಗಣ್ಯರು ಭಾಗವಹಿಸಿದ್ದರು. ಇದಕ್ಕೂ ಮುನ್ನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಗಣ್ಯರಿಗೆ ಜಿಲ್ಲಾಡಳಿತದಿಂದ ಪರ‍್ಣಕುಂಭ ಸ್ವಾಗತ ನೀಡಲಾಯಿತು. ನಂತರ ಗಣ್ಯರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ಚಾಮುಂಡಿ ತಾಯಿಯ ರ‍್ಶನ ಪಡೆದು ವೇದಿಕೆಗೆ ಆಗಮಿಸಿದ್ರು.