ಸಾಗರ : ಅಕ್ಕಿಯನ್ನು ಹೇಗೆ ಸ್ವಚ್ಛಗೊಳಿಸಬೇಕೆಂದು ಶಾಸಕ ಹರತಾಳು ಹಾಲಪ್ಪ ಪ್ರಾಯೋಗಿಕವಾಗಿ ತೋರಿಸಿಕೊಟ್ಟಿದ್ದಾರೆ. ಹೌದು, ಮಕ್ಕಳಿಗೆ ನೀಡಬೇಕಾದ ಆಹಾರ ಕಳಪೆಯಾಗಿದೆ, ಅಕ್ಕಿಯನ್ನು ಸರಿಯಾಗಿ ಸ್ವಚ್ಛಗೊಳಿಸದೆ ಅಡುಗೆ ಮಾಡಿ ಬಡಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ರೀತಿ ಘಟನೆ ಮತ್ತೆ ಮರುಕಳಿಸಿದರೆ ಸಂಬಂಧ ಪಟ್ಟವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಾಸಕರು ಅಕ್ಕಿಯನ್ನು ಹೇಗೆ ಶುಚಿಗೊಳಿಸಬೇಕೆಂದು ತೋರಿಸಿಕೊಟ್ಟಿದ್ದಾರೆ.
ಸಾಗರದ ಜಂಬಗಾರು ಹಾಸ್ಟೆಲ್‌ನಲ್ಲಿ, ವಸತಿ ಶಾಲೆಗಳ ಹಾಗೂ ಹಾಸ್ಟೆಲ್‌ಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಾರ್ಡನ್ ಮತ್ತು ಸಿಬ್ಬಂದಿಗಳ ಸಭೆ ನೆಡೆಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುವಂತೆ, ಹಾಸ್ಟೆಲ್ ಗಳಲ್ಲಿ ಸ್ವಚ್ಛತೆ ಕಾಪಾಡಿಕೊಂಡು, ಮಕ್ಕಳಿಗೆ ಅವಶ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು.