ಸ್ವಚ್ಛತಾ ಕಾರ್ಯಕ್ರಮದಲ್ಲಿ ಶಾಸಕ ಭಾಗಿ 

ಸಾಗರ : ನಗರದಲ್ಲಿ ನಡೆಯಲಿರುವ ಸಾಗರಾರತಿ ಕಾರ್ಯಕ್ರಮದ ಪ್ರಯುಕ್ತ ಬೆಳಗ್ಗೆ ಸ್ವಚ್ಛತಾ ಕಾರ್ಯಕ್ರಮ ನಡೆಯುತು. ಶಾಸಕ ಹರತಾಳು ಹಾಲಪ್ಪ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು. ಸ್ವಚ್ಛತಾ ಕಾರ್ಯದ ಬಳಿಕ ಸ್ವಯಂ ಸೇವಕರು ಹಾಗೂ ಪೌರ ಕಾರ್ಮಿಕರಿಗೆ ಉಪಹಾರ ಬಡಿಸಿದರು.

ಈ ವೇಳೆ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೆರೆಹಬ್ಬವನ್ನು ಆಚರಿಸುತ್ತಿದ್ದೇವೆ. ಸ್ವಚ್ಛತೆಯ ಕುರಿತು ಜನರಲ್ಲಿ ಜಾಗೃತಿ ಮೂಡುಸಲು ಇದನ್ನು ಮಾಡಲಾಗುತ್ತಿದೆ ಎಂದರು. ಸ್ವಚ್ಛತಾ ಕಾರ್ಯದಲ್ಲಿ ನೂರಾರು ಸ್ವಯಂ ಸೇವಕರು ಭಾಗಿಯಾಗಿದ್ದರು.