ಸಾಗರ : ಶಿವಮೊಗ್ಗ-ಸಾಗರ ಮಾರ್ಗವಾಗಿ ಚಲಿಸುವ ಕೆಎಸ್‌ಆರ್‌ಟಿಸಿ ಬಸ್ ಆನಂದಪುರ ಸಮೀಪದಲ್ಲಿ ವಿದ್ಯಾರ್ಥಿನಿ ಬಸ್ ಹತ್ತುವ ಮೊದಲೇ ಚಲಿಸಿದ ಕಾರಣ ವಿದ್ಯಾರ್ಥಿನಿ ಗಾಯಗೊಂಡ ಘಟನೆ ನಡೆದಿದೆ.
ಬಸ್ ಚಾಲಕ ಬಸ್ ನಿಲ್ಲಿಸದೆ ಇರೋ ಕಾರಣ ವಿದ್ಯಾರ್ಥಿ ಒಕ್ಕೂಟದಿಂದ ಸಾಗರದಲ್ಲಿ ಬಸ್ ತಡೆದು ಪ್ರತಿಭಟಿಸಲಾಯಿತು. ಬಸ್‌ಅನ್ನು ರಸ್ತೆ ಮಧ್ಯೆಯೇ ನಿಲ್ಲಿಸಿ ಅದರ ಎದುರು ಕೂತು ವಿದ್ಯಾರ್ಥಿಗಳು ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ.ಎಂ.ಚಿನ್ಮಯ್, ಅಜಿತ್ ಕೇಶವ್, ರೋಷನ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.