ಅಧಿಕಾರಿಗಳೊಂದಿಗೆ ಕಾಮಗಾರಿ ಪರಿಶೀಲಿಸಿದ ಶಾಸಕ 

ಸಾಗರ :  ಬಿ.ಹೆಚ್.ರಸ್ತೆ ಅಗಲೀಕರಣ ಕಾಮಗಾರಿಯನ್ನು ಶಾಸಕ ಹರತಾಳು ಹಾಲಪ್ಪ ಪರಶೀಲಿಸಿದ್ದಾರೆ. ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು ಎನ್.ಹೆಚ್ ಅಧಿಕಾರಿಗಳೊಂದಿಗೆ ಕಾಮಗಾರಿ ಕುರಿತು ಚರ್ಚೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, 73 ಕೋಟಿ ಅನುದಾನಲ್ಲಿ ಈ ಕಾಮಗಾರಿ ನಡೆಯುತ್ತಿದೆ. 8 ಕಿಲೋಮೀಟರ್ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ವರ್ಷ ಮಾರಿ ಜಾತ್ರೆಯಿದೆ. ಅಷ್ಟರೊಳಗೆ ಕಾಮಗಾರಿ ಮುಗಿಸುತ್ತಾರೆ ಎಂಬ ಭರವಸೆ ಇದೆ ಎಂದರು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಎನ್.ಹೆಚ್ ಅಧಿಕಾರಿಗಳು ಹಾಗೂ ಮತ್ತಿತತರು ಉಪಸ್ಥಿತರಿದ್ದರು.