ಸಹಕಾರಿ ತರಬೇತಿ ಶಿಬಿರ ಆಯೋಜನೆ

ಶಿವಮೊಗ್ಗ :  ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಗೆ ಸಹಕಾರಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಜುಲೈ ೧೮ರಂದು ಶಿಕಾರಿಪುರ ತಾಲ್ಲೂಕಿನಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರುಗಳಿಗೆ ಒಂದು ದಿನದ ಜಿಲ್ಲಾ ವಿಶೇಷ ಸಹಕಾರ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.  ದಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಶಿಬಿರ ಜರುಗಲಿದೆ.

ಅದೇ ರೀತಿ ಜುಲೈ ೨೬ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ಜರುಗುವ ಸಹಕಾರ ಸಂಘಗಳ ರಿಟನಿಂಗ್ ಅಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕರುಗಳಿಗೆ ಒಂದು ದಿನದ ಜಿಲ್ಲಾ ವಿಶೇಷ ಸಹಕಾರ ತರಬೇತಿ ಶಿಬಿರ ಆಯೋಜಿಸಲಾಗಿದೆ.  ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಡಾ. ಕುರಿಯನ್ ಸಭಾಂಗಣದಲ್ಲಿ ಶಿಬಿರ ನಿಗಧಿಗೊಳಿಸಲಾಗಿದೆ.

ಹಾಗೇನೆ,ಇಲ್ಲೆಯೇ ಆಗಸ್ಟ್ ೪ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೇ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರುಗಳಿಗೆ ಒಂದು ದಿನದ ಜಿಲ್ಲಾ ವಿಶೇಷ ಸಹಕಾರ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಲಾಯ್ತು.