ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯು ಸಾಹಿತ್ಯ ಹುಣ್ಣಿಮೆ ಎಂಬ ವಿಶೇಷವಾದ ಕಾರ್ಯಕ್ರಮವನ್ನು ಆಯೋಜನೆ ಮಾಡ್ತಾ ಬಂದಿದೆ. ಇದವರಗೂ ೨೦೦ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು 201ನೇ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜಾಗಿದೆ.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ಶುಕ್ರವಾರ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು ಹಾಸ್ಯ, ಚುಟುಕು, ಕವಿತೆ, ಗೀತೆ, ವಿಚಾರ, ಕಥೆಗಳ ರಸದೌಥಣವೇ ಇರಲಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇನ್ನು ಹಾಸ್ಯಸಂಜೆ ಕಾರ್ಯಕ್ರಮವನ್ನು ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ನಡೆಸಿ ಕೊಡಲಿದ್ದಾರೆ ಎಂದು ಮಾಹಿತಿ ನೀಡಿದರು.