25 ಕ್ಕೂ ಹೆಚ್ಚು ಸಹ್ಯಾದ್ರಿ ಕಾಲೇಜು ಹಾಸ್ಟಲ್‌ನ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು 

ಶಿವಮೊಗ್ಗ : ಸಹ್ಯಾದ್ರಿ ಕಾಲೇಜಿನ ವಸತಿ ನಿಲಯದಲ್ಲಿ ಫುಡ್ ಪಾಯಿಸನ್‌ನಿಂದಾಗಿ 25ಕ್ಕು ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿನಿಯರನ್ನ ಚಿಕಿತ್ಸೆಗಾಗಿ ನಗರದ ಅಶೋಕ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ವಿದ್ಯಾರ್ಥಿಗಳ ಆರೋಗ್ಯ ಸುಧಾರಸಿದೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಈ.ಕಾಂತೇಶ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು ಹಾಗೂ ವೈದ್ಯರ ಬಳಿ ವಿದ್ಯಾರ್ಥಿಗಳ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡರು. ಗುರುವಾರ ಊಟದ ನಂತರ ಫುಡ್ ಪಾಯಸನ್ ಉಂಟಾಗಿದ್ದು ವಿದ್ಯಾರ್ಥಿನಿಯರಲ್ಲಿ ವಾಂತಿ, ಹೊಟ್ಟೆನೋವು, ತಲೆ ಸುತ್ತು ಕಾಣಿಸಿ ಕೊಂಡಿತ್ತು. ನಂತರ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.