ಜಿಲ್ಲಾಧಿಕಾರಿಗೆ ಧನ್ಯವಾದ ತಿಳಿಸಿದ ಸಕ್ಷಮ ಸಂಸ್ಥೆ 

ಶಿವಮೊಗ್ಗ : ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಗೆ ಹೋಗುವ ಮಾರ್ಗದಲ್ಲಿ ಅಂಗವಿಕಲರಿಗೆ ಅನುಕೂಲವಾಗುವಂತೆ ರ್‍ಯಾಂಪ್ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಸಕ್ಷಮ ಸಂಸ್ಥೆಯವರು ಜಿಲ್ಲಾಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಸಾಗರ ರಸ್ತೆಯಲ್ಲಿರುವ ಕಲ್ಯಾಣಾಧಿಕಾರಿ ಕಚೇರಿ ಬಳಿ ಸ್ಮಾರ್ಟ್‌ಸಿಟಿ ಕಾಮಗಾರಿ ನಡೆಸಲಾಗಿತ್ತು. ಇದರಿಂದಾಗಿ ಕಚೇರಿಗೆ ಆಗಮಿಸುವ ಅಂಗವಿಕಲರಿಗೆ ತೀವೃ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಅಂಗವಿಕರಲರಿಗೆ ಅನುಕೂಲವಾದ ವ್ಯವಸ್ಥೆ ಕಲ್ಪಿಸುವಂತೆ ಸಕ್ಷಮ ಸಂಸ್ಥೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತ್ತು. ಸಂಸ್ಥೆಯ ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ ರ್‍ಯಾಂಪ್ ವ್ಯವಸ್ಥೆ ಮಾಡಿಸಿದ್ದಾರೆ. ಆದ್ದರಿಂದ ಸಕ್ಷಮ ಸಂಸ್ಥೆಯ ಜಿಲ್ಲಾ ಸಂಚಾಲಕ ಸಿ.ಆರ್.ಶಿವಕುಮಾರ್ ಜಿಲ್ಲಾಧಿಕಾರಿಗೆ ಧನ್ಯವಾದ ತಿಳಿಸಿದ್ದಾರೆ.