ಬೆಲೆ ಏರಿಕೆ ಖಂಡಿಸಿ ಸಂತೇಕಡೂರಿನಲ್ಲಿ ಪ್ರತಿಭಟನೆ 

ಸಂತೇಕಡೂರು : ನಿರಂತರವಾಗಿ  ಪೆಟ್ರೋಲ್ ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸಂತೇಕಡೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ಹಾಗೂ ಪಿ.ಎಲ್.ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಆರ್.ವಿಜಯಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಅಡುಗೆ ಅನಿಲದ ಸಿಲಿಂಡರ್, ಕಾರು ಹಾಗೂ ಬೈಕುಗಳಿಗೆ ಹೂವಿನ ಹಾರ ಹಾಕಿ ಶ್ರದ್ಧಾಜಂಲಿ ಸಲ್ಲಿಸುವ ಮೂಲಕ ಪ್ರತಿಭಟಿಸಲಾಗಿದೆ. ಅಂದ್ಹಾಗೆ ಇದೇ ರೀತಿ ರಾಜ್ಯಾದ್ಯಂತ ಕಾಂಗ್ರೆಸ್ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.