ನನ್ನ ಸಾವಿಗೆ ಸಚಿವ ಕೆ.ಎಸ್.ಈಶ್ವರಪ್ಪ ಕಾರಣ 

ಬೆಳಗಾವಿ : ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇಕಡಾ 40 ಪಸೆಂಟೇಜ್ ಆರೋಪ ಮಾಡಿದ್ದ ಬೆಳಗಾವಿ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳಿಗೆ ವಾಟ್ಸಪ್ ಸಂದೇಶ ರವಾನಿಸಿ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಡರಾತ್ರಿ ವಾಟ್ಸಪ್ ಮೆಸೇಜ್ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬಳಿಕ ಉಡುಪಿಯ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂತೋಷ್ ಪಾಟೀಲ್ ಶವ ಪತ್ತೆಯಾಗಿದೆ. ಮಾಧ್ಯಮ ಪ್ರತಿನಿಧಿಗಳಿಗೆ ಕಳುಹಿಸಿದ ಮೆಸೇಜ್‌ನಲ್ಲಿ ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಕಾರಣ ಎಂದು ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ಆರಂಭವಾಗಿವೆ.