ಶ್ರೀ ವಿಖ್ಯಾತನಂದ ಸ್ವಾಮೀಜಿಗೆ ಗುರವಂದನಾ ಕಾರ್ಯಕ್ರಮ 

ಶಿವಮೊಗ್ಗ : ಜೆ.ಪಿ.ನಾರಾಯಣಸ್ವಾಮಿ ಪ್ರತಿಷ್ಠಾನ ವತಿಯಿಂದ ಜೂನ್ ೨೫ ಜಿಲ್ಲಾ ಆರ್ಯ ಈಡಿಗರ ಭವನದಲ್ಲಿ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಮಾಧ್ಯಮಗೋಷ್ಠೀ ನಡೆಸಿ ಮಾತನಾಡಿದ ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ, ನಾರಾಯಣಸ್ವಾಮಿ ಪ್ರತಿಷ್ಠಾನದಿಂದ ರಾಜ್ಯಾದ್ಯಂತ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಸುಮಾರು ೨೮೬ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಎಂದರು.

ಹಾಗೇನೆ ಇದೇ ವೇಳೆ ಅರ್ಯ ಈಡಿಗರ ಗುರುಪೀಠದ ಅಧ್ಯಕ್ಷ ಶ್ರೀ ವಿಖ್ಯಾತನಂದ ಸ್ವಾಮೀಜಿ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಶ್ರೀಗಳಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾನವಿ ಮಾಡಿದರು. ಮಾಧ್ಯಮಗೋಷ್ಠಿಯಲ್ಲಿ ಎಸ್.ಸಿ. ರಾಮಚಂದ್ರ, ಎಚ್. ರವಿ, ರಾಮಪ್ಪ ಕಾಗೋಡು, ಕೃಷ್ಣಪ್ಪ, ಜಿ.ಡಿ.ಮಂಜುನಾಥ, ರಾಜಪ್ಪ ತೇಕಲೆ ಹಾಜರಿದ್ದರು.