ಶಿವಮೊಗ್ಗ : ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ತಾಯಿದ್ದು, ಶಿವಮೊಗ್ಗ ನಗರದಲ್ಲಿರುವ ಶಾಲೆಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ.
ಜಿಲ್ಲಾಡಳಿತ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗದ 45ಶಾಲೆಗಳಲ್ಲಿ 200ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ 1ರಿಂದ 9ನೇ ತರಗತಿಯ ಎಲ್ಲಾ ಶಾಲೆಯ ವಿದ್ಯಾರ್ಥಿಗಳಿಗೆ, ಬುಧವಾರದಿಂದ ಗುರುವಾರದವರೆಗೆ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ.
ಮಾರ್ಚ್ ಕೊನೆ ವಾರದಲ್ಲಿ ಕೋಟೆ ಮಾರಿಕಾಂಬ ಜಾತ್ರೆ ನಡೆಸಲು ತೀರ್ಮಾನಿಸಲಾಗಿದೆ. ಆದ್ರೆ ಆ ಸಮಯದಲ್ಲಿ ಮತ್ತೆ ಕೋವಿಡ್ ಹೆಚ್ಚಾದರೆ ನಾವು ತೆಗೆದುಕೊಳ್ಳುವ ಕ್ರಮಕ್ಕೆ ಜಾತ್ರೆ ಸಮಿತಿ ಒಪ್ಪಿದೆ. ಹಾಗೂ ಆರು ದಿನ ನಡೆಯುತ್ತಿದ್ದ ಜಾತ್ರೆಯನ್ನ ಎರಡು ದಿನಗಳಿಗೆ ಮೊಟಕುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.