ಬನ್ನಿ ಮಕ್ಕಳೆ ಶಾಲೆಗೆ...

ಶಿವಮೊಗ್ಗ : ರಾಜ್ಯಾದ್ಯಂತ ಇಂದಿನಿಂದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕಲರವ ಕೇಳಲಿದೆ. ಬೇಸಿಗೆ ರಜೆ ಅಂತ್ಯವಾಗಿ ಶಾಲೆಗಳು ಪುನಾರಂಭವಾಗಿವೆ. ಮಕ್ಕಳು ಮತ್ತೆ ಹೆಗಲಿಗೆ ಬ್ಯಾಗ್ ಹಾಕಿ ಶಾಲೆಗಳತ್ತ ಮುಖ ಮಾಡಿದ್ದಾರೆ.

ಸರ್ಕಾರಿ, ಅನುದಾನಿತ ಮತ್ತು ಅನುದಾನಿತರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2022-23ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದೆ. ಶಾಲೆಗೆ ಬಂದ ವಿದ್ಯಾರ್ಥಿಗಳನ್ನು ಶಿಕ್ಷಕರು ಆದರದಿಂದ ಬರಮಾಡಿಕೊಂಡಿದ್ದಾರೆ. ಶಿವಮೊಗ್ಗದ ಹಲವು ಶಾಲೆಗಳಲ್ಲಿ ಮಕ್ಕಳಿಗೆ ಚಾಕಲೇಟ್ ನೀಡಿ ಶಾಲೆಗೆ ಬರಮಾಡಿಕೊಳ್ಳಲಾಗಿದೆ.