ಶಿವಮೊಗ್ಗ : 2022-23ನೇ ಸಾಲಿನ ಬಜೆಟ್ ಮಂಡನೆಗೆ ರಾಜ್ಯ ಸರ್ಕಾರ ಸಿದ್ಧತೆಯಲ್ಲಿದ್ದು, ಈ ಬಜೆಟ್ ಜನಪರವಾಗಿರಬೇಕು ಹಾಗೂ ಬಡವರು, ಮಧ್ಯಮ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಸಮಾಜ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಸಮಾಜದ ಎಲ್ಲಾ ವರ್ಗದವರಿಗೆ ಅನುಕೂಲವಾಗಿರಬೇಕೆಂದು ಎಸ್‌ಡಿಪಿಐ ಹಕ್ಕೊತ್ತಾಯ ಮಾಡಿದೆ.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಇಮ್ರಾನ್ ಅಹಮದ್, ಪ್ರತಿಯೊಬ್ಬ ಪ್ರಜೆಗೂ ಉಚಿತ ಆರೋಗ್ಯ ಸೇವೆ ಒದಗಿಸಬೇಕು. ಅಲ್ಪಸಂಖ್ಯಾತ ಇಲಾಖೆ ಬಜೆಟ್‌ಅನ್ನು ಹತ್ತು ಸಾವಿರ ಕೋಟಿಗೆ ಏರಿಸಬೇಕು. ಜಸ್ಟೀಸ್ ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು ಸೇರಿದಂತೆ ಹಲವಾರು ವಿಷಯಗಳ ಕುರಿತಾಗಿ ಹಕ್ಕೊತ್ತಾಯಿಸಿದರು.