ಶಿವಮೊಗ್ಗ : ವಾರಣಾಸಿಯ ಜ್ಞಾನವ್ಯಾಪಿ ಮಸೀದಿ ವಿಚಾರವಾಗಿ ಷಡ್ಯಂತ್ರ ರೂಪಿಸಲಾಗಿದೆ. ಹೀಗಾಗಿ 1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎಸ್‌ಡಿಪಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮಸೀದಿ ವಿಚಾರವಾಗಿ ಮಾಡಲಾಗುತ್ತಿರುವ ಷಡ್ಯಂತ್ರವನ್ನು ಸೋಲಿಸೋಣ ಎಂದು ಎಸ್‌ಡಿಪಿಐ ಕರೆ ನೀಡಿದೆ.