ಎರಡನೇ ದಿನಕ್ಕೆ ಕಾಲಿಟ್ಟ ಮೇಕೆದಾಟು ಪಾದಯಾತ್ರೆ 

ಬಿಡದಿ : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಎರಡನೇ ಹಂತದ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಭಾನುವಾರ ರಾಮನಗರದಿಂದ ಹೊರಟ ಕಾಂಗ್ರೆಸ್ ನಾಯಕರ ಪಾದಯಾತ್ರೆ ಸುಮಾರು 16 ಕಿ.ಮೀ. ಸಂಚರಿಸಿ ಬಿಡದಿ ಪಟ್ಟಣ ತಲುಪಿತ್ತು.ಸೋಮವಾರ ಬಿಡದಿ ಪಟ್ಟಣದ ಬಿಜಿಎಸ್ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ನೆಡಸಿ ಬೆಂಗಳೂರಿನತ್ತ ಪಾದಯಾತ್ರೆ ಸಾಗಿದೆ. ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಪಾದಯಾತ್ರೆಯು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿ ಸಿಲಿಕಾನ್ ಸಿಟಿ ಪ್ರವೇಶ ಮಾಡಲಿದೆ.