ಪಿಯುಸಿ ಅಂಕಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು 

ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಪಿಯುಸಿ ಪರೀಕ್ಷೆಯ ಅಂಕಗಳನ್ನ ಮೊದಲಿನಂತೆ ತೆಗೆದುಕೊಳ್ಳಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹಳೆಯ ನಿಯಮದಂತೆ ಈ ತೀರ್ಮಾನಕ್ಕೆ ಬಂದಿದೆ.

ಕಳೆದ ವರ್ಷ ಕೋವಿಡ್ ಕಾರಣಕ್ಕೆ ಕೇವಲ ಪರೀಕ್ಷೆಯಲ್ಲಿನ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲಾಗಿತ್ತು. ಆದರೆ, ಈ ಬಾರಿ ಮತ್ತೆ ಸಿಇಟಿಯಲ್ಲಿ ಪಡೆಯುವ ಅಂಕಗಳು ಮತ್ತು ದ್ವಿತೀಯ ಪಿಯು ಪರೀಕ್ಷೆಯ ಅಂಕಗಳು ಸೇರಿ ಎರಡನ್ನು ಪರಿಗಣಿಸಲಾಗುವುದು. ಅಂದ್ಹಾಗೆ, ಏಪ್ರಿಲ್ 12ರಿಂದ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಜೂನ್ 16 ರಿಂದ 18ರವರೆಗೆ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.