ರಾಜ್ಯಾದ್ಯಾಂತ ಫೆ. 15ಕ್ಕೆ ಸಂತ ಸೇವಾಲಾಲ್ ಜಯಂತಿ ಆಚರಣೆ 

ಶಿವಮೊಗ್ಗ : ಬಂಜಾರ ಸಮುದಾಯವನ್ನ ಮುಖ್ಯವಾಹಿನಿಗೆ ತಂದು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ಸರ್ಕಾರದ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ.

ಈ ಹಿನ್ನೆಲೆಯಲ್ಲಿ ಬಂಜಾರ ಸುಮುದಾಯದ ವಿಶ್ವಗುರು ಸಂತ ಸೇವಾಲಾಲರ 283ನೇ ಜಯಂತಿಯನ್ನ ರಾಜ್ಯಾದ್ಯಂತ ಆಚರಿಸಲಾಗುತ್ತದೆ ಎಂದು ಶಾಸಕ ಅಶೋಕ ನಾಯ್ಕ್ ಹೇಳಿದರು. ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಜಿಲ್ಲಾ ಬಂಜಾರ ಸಂಘದಿಂದ ಫೆಬ್ರವರಿ 15ರಂದು ಕುವೆಂಪು ರಂಗಮಂದಿರದಲ್ಲಿ ಸೇವಾಲಾಲರ ಜಯಂತಿಯನ್ನ ಸರಳವಾಗಿ ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ಸಮಾಜದ ಬಾಂಧವರು ಭಾಗವಹಿಸಬೇಕೆಂದು ಕೇಳಿಕೊಂಡರು.