ಶಿವಮೊಗ್ಗ : ವಾಸವಿ ಪಬ್ಲಿಕ್ ಶಾಲೆಯ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಶೇಷಾಚಲ ಅವರಿಗೆ 67ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರ ಕುಟುಂಬದವರು, ಅಭಿಮಾನಿಗಳು ಹಾಗೂ ಸ್ನೇಹಿತರು, ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಅಭಿನಂದನಾ ಕಾರ್ಯಕ್ರಮವನ್ನ ಆಯೋಜನೆ ಮಾಡಿದ್ದರು.
ತಮ್ಮ ಹುಟ್ಟುಹಬ್ಬವನ್ನ ವರ್ಷವಿಡೀ ಸಂಸ್ಕೃತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ವಿಶೇಷವಾಗಿ ಆಚರಿಸಿಕೊಳ್ಳಲು ಎಸ್.ಕೆ.ಶೇಷಾಚಲ ನಿರ್ಧರಿಸಿದ್ದಾರೆ. ಈ ಅಭಿನಂದನಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಪಟ್ಟಾಭಿರಾಮ್, ಶಿವಮೊಗ್ಗ ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎನ್.ಗೋಪಿನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.