ಶಿವಮೊಗ್ಗ : ಬರುವ ಜೂನ್, ಜುಲೈನಲ್ಲಿ ಶಿವಮೊಗ್ಗ ಏರ್‌ಪೋರ್ಟ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಅವರು, ಏರ್ ಆಂಬುಲೆನ್ಸ್, ಏರ್ ಟ್ಯಾಕ್ಸಿ, ಟೂರಿಸಂ ಗಮನದಲ್ಲಿಟ್ಟುಕೊಂಡು ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತಿದೆ. ಜೂನ್, ಜುಲೈನಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗ ಏರ್‌ಪೋರ್ಟ್ ಕಾಮಗಾರಿ ಯಾವಾಗ ಪೂರ್ಣವಾಗುತ್ತೆ : ಏನ್ ಹೇಳಿದಾರೆ ನೂತನ ಜಿಲ್ಲಾ ಉಸ್ತುವಾರಿ ಸಚಿವರು
