ಶಿವಮೊಗ್ಗ : ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಸಚಿವ ಈಶ್ವರಪ್ಪ ನೇತೃತ್ವದಲ್ಲಿ ಸಿಎಂಗೆ ಮನವಿ ಸಲ್ಲಿಸಿದ್ದಾರೆ.
ಶಿವಮೊಗ್ಗ ನಗರಕ್ಕೆ ಯಡಿಯೂರಪ್ಪಗೆ ಅವಿನಾಭಾವ ಸಂಬಂಧವಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದೆ. ಈಗ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕೂಡ ಅವರ ಕನಸಿನ ಕೂಸಾಗಿದೆ. ಆದ್ದರಿಂದ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ.
ಈ ವೇಳೆ, ಗೃಹಸಚಿವ ಆರಗ ಜ್ಞಾನೇಂದ್ರ, ಶಾಸಕ ಹರತಾಳು ಹಾಲಪ್ಪ, ಶಾಸಕ ಕುಮಾರ್ ಬಂಗಾರಪ್ಪ, ಎಂಎಲ್‌ಸಿ ಆಯನೂರು ಮಂಜುನಾಥ್, ರುದ್ರೇಗೌಡ, ಭಾರತೀ ಶೆಟ್ಟಿ ಹಾಗೂ ಡಿ.ಎಸ್. ಅರುಣ್ ಉಪಸ್ಥಿತರಿದ್ದರು.