ಶಿವಮೊಗ್ಗ : ಆಯುಷ್ ವಿವಿ ನಿರ್ಮಾಣ ಕಾರ್ಯಕ್ಕೆ ಗ್ರಹಣ ಹಿಡಿದಿದೆ. ರಾಜ್ಯ ಸರ್ಕಾರ ಈ ಯೋಜನಗೆ ತಿಲಾಂಜಲಿ ಹಾಡಲು ಹೊರಟಿದೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಪೆಬ್ರವರಿ 17 ರಂದು ಪ್ರಕಟವಾದ ರಾಜ್ಯಪತ್ರದಲ್ಲಿ ಜಿಲ್ಲೆಗೆ ಆಯುಷ್ ವಿವಿ ಮಂಜೂರು ಮಾಡಲಾಗಿದೆ. ಅಲ್ಲದೆ 2021-21 ನೇ ಸಾಲಿನ ಬಜೆಟ್‌ನಲ್ಲಿ 20 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಇಷ್ಟಾದರು ಕೂಡ ವಿವಿಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಗಳು ಆರಂಭವಾಗಿಲ್ಲ. ಈ ಸಂಬಂಧ ಜಿಲ್ಲೆಯ ಜನಪ್ರತಿನಿಧಿಗಳು ಕಾಳಜಿ ವಹಿಸಿಸಬೇಕು. ಕೂಡಲೇ ಶಿವಮೊಗ್ಗದಲ್ಲಿ ಆಯುಷ್ ವಿವಿ ಸ್ಥಾಪನೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.