ಶಿವಮೊಗ್ಗ : ಹಣದುಬ್ಬರ ಮುಕ್ತ ಭಾರತ ಅಭಿಯಾನದ ಹೆಸರಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಕರೆ ನೀಡಿತ್ತು. ಈ ಹಿನ್ನೆಲೆ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಮಹಾವೀರ ಸರ್ಕಲ್‌ನಲ್ಲಿ ಅಡುಗೆ ಅನಿಲದ ಸಿಲಿಂಡರ್‌ಗೆ ಹೂವಿನ ಹಾರ ಹಾಕಿ, ಜಾಗಟೆ ಗಂಟೆ ಬಾರಿಸುವ ಮೂಲಕ ವಿಶೇಷವಾಗಿ ಪ್ರತಿಭಟನೆ ನಡೆಸಲಾಗಿದೆ.
ಕರೋನ ಹೊಡೆತದಿಂದ ಜನರು ಚೇತರಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಅಡುಗೆ ಅನಿಲದ ಬೆಲೆಯೇರಿಕೆಯಿಂದಾಗಿ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇಂಧನ ಬೆಲೆ ಏರಿಕೆ ಪರಿಣಾಮವಾಗಿ ಅಗತ್ಯ ವಸ್ತುಗಳ ಬೆಲೆ ಕೂಡ ಹೆಚ್ಚಳವಾಗುತ್ತಿದೆ. ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಆದ್ದರಿಂದ ರಾಷ್ಟ್ರಪತಿಯವರು ಕೇಂದ್ರ ಸರ್ಕಾರವನ್ನು ವಜಾಗೊಳಿಸಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.