ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ರೈಲು ತಡೆ ಚಳವಳಿ 

ಶಿವಮೊಗ್ಗ : ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಖಂಡಿಸಿ ಉತ್ತರ ಭಾರತದಲ್ಲಿ ಆರಂಭವಾಗಿರುವ ಪ್ರತಿಭಟನೆ ಕರ್ನಾಟಕಕ್ಕೂ ವ್ಯಾಪಿಸಿದೆ. ಶಿವಮೊಗ್ಗದಲ್ಲಿಂದು ಅಗ್ನಿಪಥ್ ಯೋಜನೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದ್ದಾರೆ.

ನಗರದ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆ ರೈಲ್ವೆ ನಿಲ್ದಾಣದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು ೪೦ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.