ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ : ಬಿಜೆಪಿ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ಮತ್ತೆ ಶೇಕಡಾ ೩ ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡಲಾಗುತ್ತಿದೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಮಹಾನಗರ ಪಾಲಿಕೆ ಕಚೇರಿ ಮುಂಭಾಗ ಜಿಲ್ಲಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ ಸರ್ಕಾರ ವಿರುದ್ಧ ಘೋಷಣೆ ಕೂಗಿದ್ದಾರೆ.

ಈ ವೇಳೆ ಮಾತನಾಡಿದ ಹೆಚ್.ಎಸ್.ಸುಂದರೇಶ್, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನತೆಗೆ ವಿರುದ್ಧವಾಗಿರುವ ಕೆಲಸವನ್ನೇ ಮಾಡ್ತಾಯಿದ್ದಾರೆ. ಶಿವಮೊಗ್ಗದಲ್ಲಿನ ಬಿಜೆಪಿ ಜನಪ್ರತಿನಿಧಿಗಳು ಜನ ಹಿತದ ಕುರಿತಾಗಿ ಮಾತನ್ನೇ ಆಡುವುದಿಲ್ಲ. ಸ್ಮಾರ್ಟ್‌ಸಿಟಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ. ನೀರಿನ ಕಂದಾಯವನ್ನು ಏಳೆಂಟು ಪಟ್ಟು ಹೆಚ್ಚಿಗೆ ಮಾಡಿ ಜನರಿಗೆ ಹೊರೆಯಾಗುವಂತೆ ಮಾಡಿದ್ದಾರು. ಆದ್ರೆ ಯಾವಾಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಹಳೆ ತೆರಿಗೆಯನು ಜಾರಿಗೆ ತರುವುದಾಗಿ ಘೋಷಣೆ ಮಾಡಿದೆವು. ಆಗ ಎಚ್ಚೆತ್ತುಕೊಂಡ ಸರ್ಕಾರ ನೀರಿನ ತೆರಿಗೆ ಕಡಿಮೆ ಮಾಡಿದೆ ಎಂದರು.