ಶಿವಮೊಗ್ಗ : ರಾಜ್ಯಾದ್ಯಂತ ಪಠ್ಯ ಪರಿಷ್ಕರಣೆ ವಿಚಾರವಾಗಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಹವೀರ ವೃತ್ತದ ಬಳಿ ಪ್ರತಿಭಟನೆ ನಡೆಸಲಾಗಿದೆ.
ಪಠ್ಯ ಪರಿಷ್ಕರಣೆಯಲ್ಲಿ ನಾಡಿನ ಮಹಾನೀಯರಿಗೆ ಅವಮಾನ ಮಾಡಲಾಗಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜೊತೆಗೆ ಬಿಜೆಪಿ ಚೆಲ್ಲಾಟ ನಡೆಸ್ತಾಯಿದೆ. ಬಸವ ಬೇಕು, ಕುವೆಂಪು ಬೇಕು, ಅಂಬೇಡ್ಕರ್ ಬೇಕು ಆರ್‌ಎಸ್‌ಎಸ್ ಬೇಡ ಎಂದು ಘೋಷಣೆ ಕೂಗಿ, ರೋಹಿತ್ ಚಕ್ರತೀರ್ಥ ಪ್ರತಿಕೃತಿಗೆ ಬೆಂಕಿಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥರನ್ನು ಬಂಧಿಸಬೇಕು, ಹಳೆಯ ಪಠ್ಯ ಪುಸ್ತಕಗಳನ್ನೇ ಮುಂದುವರೆಸಬೇಕು ಎಂದು ಆಗ್ರಹಿಸಿದರು.