ಶಿವಮೊಗ್ಗ : ಗುಹವಾಟಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರ ಮೇಲಾಗಿರುವ ಶೋಷಣೆಯನ್ನು ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ ಖಂಡಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಶಿವಮೊಗ್ಗ ಬೀದಿ ಬದಿ ವ್ಯಾಪಾರಸ್ಥರ ಸಂಘ, ಕರ್ನಾಟಕದಲ್ಲಿ ಬಹಳಷ್ಟು ವಿದ್ಯಾವಂತರು ಉದ್ಯೋಗ ಸಿಗದೆ ನಿರುದ್ಯೋಗಿಗಳಾಗಿದ್ದಾರೆ. ಅಂತವರು ಬೀದಿ ಬದಿಗಳಲ್ಲಿ ಸಣ್ಣ ಪುಟ್ಟ ವ್ಯಾಪಾರ ನಡೆಸುತ್ತಿದ್ದಾರೆ. ಹಾಗೆಯೇ ಹಲವು ಮಂದಿ ಅನಕ್ಷರಸ್ಥರು ಕೂಡ ಇದೇ ವ್ಯಾಪಾರವನ್ನು ನೆಚ್ಚಿಕೊಂಡಿದ್ದಾರೆ.
ಇಂಥಹ ವ್ಯಾಪಾರಿಗಳ ಟಿವಿಸಿ ಸದಸ್ಯರ ಸಮ್ಮುಖದಲ್ಲಿ ಡಿಜಿಟಲ್ ಕಾರ್ಡ್ ನೀಡಬೇಕು. ತಿಂಗಳಿಗೊಮ್ಮೆ ಟಿವಿಸಿ ಸಭೆ ನಡೆಯಬೇಕು. ಆ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಪ್ಪದೆ ಭಾಗವಹಿಸಲು ಆದೇಶಿಸಬೇಕೆಂದು ಜಿಲ್ಲಾಧಿಕಾರಿ ಮೂಲಕ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.