ಮೈಕ್ರೋ ಎಟಿಎಂ ಹಾಗೂ ಸಾಲದ ಚೆಕ್ ವಿತರಣೆ ಕಾರ್ಯಕ್ರಮ 

ಶಿವಮೊಗ್ಗ : ಡಿಸಿಸಿ ಬ್ಯಾಂಕ್ ವತಿಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳಿಗೆ ಮೈಕ್ರೋ ಎಟಿಎಂ ವಿತರಣೆ ಹಾಗೂ ವಿವಿಧ ಫಲಾನುಭವಿಗಳಿಗೆ ಸಾಲದ ಚೆಕ್ ವಿತರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಕಾರ್ಯಕ್ರವನ್ನು ಉದ್ಘಾಟಿಸಿದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ಇನ್ನು ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಕೆ.ಬಿ.ಅಶೋಕ್‌ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ ಹಾಗೂ ಡಿ.ಎಸ್.ಅರುಣ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.