ಶಿವಮೊಗ್ಗ : ನಗರ ಪಾಲಿಕೆ, ನಗರ ಸಭೆ, ಪುರಸಭೆ ಹಾಗೂ ಮಹಾನಗರ ಪಾಲಿಕೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಹಾಗೂ ನೌಕರರನ್ನು ಖಾಯಂ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ಮೇ 19ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆ ಪೌರಕಾರ್ಮಿಕರ ಸಂಘ ಹಾಗೂ ಶಿವಮೊಗ್ಗ ಮಹಾನಗರ ನೇರ ಪಾವತಿ ಪೌರಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಪ್ರತಿಭಟನೆ ನಡೆಯಲಿದೆ. ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ್ ಇದರ ನೇತೃತ್ವ ವಹಿಸಿಕೊಂಡಿದ್ದಾರೆ ಎಂದು ಪ್ರತಿಭಟನೆ ಆಯೋಜಕರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು.