ಮೇಯರ್, ಉಪ ಮೇಯರ್ ಚುನಾವಣೆಗೆ ಬ್ರೇಕ್ 

ಹೈಲೆಟ್ಸ್ : 

ಮೇಯರ್, ಉಪ ಮೇಯರ್ ಚುನಾವಣೆಗೆ ಬ್ರೇಕ್ 
ಸೆಪ್ಟೆಂಬರ್ 13ಕ್ಕೆ ನಿಗದಿಯಾಗಿದ್ದ ಚುನಾವಣೆ 
ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ 
ಎಸ್‌ಟಿಗೆ ಮೀಸಲಾತಿ ನೀಡಿಲ್ಲವೆಂದು ಅರ್ಜಿ ಸಲ್ಲಿಕೆ 

ಶಿವಮೊಗ್ಗ : ೬ ತಿಂಗಳ ನಂತರ ಶಿವಮೊಗ್ಗದ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಆದ್ರೀಗ, ಹೈಕೋರ್ಟ್ ಬ್ರೇಕ್ ಹಾಕಿದೆ. ಹೌದು, ಪಾಲಿಕೆ ಸದಸ್ಯ ನಾಗರಾಜ್ ಹೈಕೋರ್ಟ್ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಎಸ್‌ಟಿ ಪ್ರವರ್ಗಕ್ಕೆ ಮೀಸಲು ನೀಡಬೇಕು ಎಂದು ಅರ್ಜಿಯಲ್ಲಿ ಕೇಳಿಕೊಂಡಿದ್ದರು.

ಇದರ ವಿಚಾರಣೆ ನಡೆಸಿದ ಹೈಕೋರ್ಟ್, ಮೇಯರ್- ಉಪ ಮೇಯರ್ ಚುನಾವಣೆಗೆ ತಾತ್ಕಾಲಿಕ ತಡೆ ನೀಡಿದೆ. ಈ ಕಾರಣದಿಂದಾಗಿ ಪ್ರದೇಶಿಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದ್ದಾರೆ. ಪ್ರಕರಣದ ವಿಚಾರಣೆ ನಡೆದ ಬಳಿಕ ಮೇಯರ್, ಉಪ ಮೇಯರ್ ಚುನಾವಣೆ ಮುಹೂರ್ತ ನಿಗದಿಯಾಗಲಿದೆ.