ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಪ್ರಕರಣ : ಎಸ್‌ಡಿಪಿಐ ಸಂಘಟನೆಯಿಂದ ಖಂಡನೆ

ಶಿವಮೊಗ್ಗ : ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಹಾಗೂ ಯದುವೀರ್ ಸಿಂಗ್  ಮೇಲೆ ಬೆಂಗಳೂರಿನಲ್ಲಿ ನಡೆದಿರುವ ಹಲ್ಲೆಗೆ ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಎಸ್‌ಡಿಪಿಐ ಸಂಘಟನೆ ಕೂಡ ಈ ಘಟನೆಯನ್ನು ಖಂಡಿಸಿದೆ.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿರುವ ಎಸ್‌ಡಿಪಿಐ ಕಾರ್ಯಕ್ರರ್ತರು, ಈ ಷಡ್ಯಂತ್ರದ ಹಿಂದೆ ಇದ್ದಾರೆ ಎಂದು ತನಿಖೆ ನಡೆಸಬೇಕು. ತನಿಖೆಯನ್ನು ಬಹಿರಂಗ ಪಡೆಸಬೇಕು. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಹಾಗೆಯೇ, ಮಸಿ ಬಳಿಯುವ ವೇಳೆ ಆರೋಪಿಗಳು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಆದ್ದರಿಂದ ಇದು ಸರ್ಕಾರದ ಪ್ರಾಯೋಜಿತ ಕೃತ್ಯವೇ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.